ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ಮಂಗಳೂರು ಹಾಗೂ ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಖೋ ಖೋ ಪಂದ್ಯಾಟದಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ಫೈನಲ್ ಪಂದ್ಯದಲ್ಲಿ ಆಳ್ವಾಸ್ ಬಾಲಕರ ತಂಡ ಶ್ರೀ ದುರ್ಗಾಪರಮೇಶ್ವರಿ ಪಿ.ಯು. ಕಾಲೇಜು, ಕಟೀಲು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು. ಆಳ್ವಾಸ್ ಬಾಲಕಿಯರ ತಂಡ ಪರಿಜ್ಞಾನ ಪಿ.ಯು. ಕಾಲೇಜು, ಸೋಮೇಶ್ವರ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆದುಕೊಂಡಿತು.